
Ashvavega reporter Mahesh receives the 'Nadaprabhu Kempegowda Award'
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡುತ್ತದೆ. ಅದರಂತೆ 2025ರ ಕೆಂಪೇಗೌಡ ಪ್ರಶಸ್ತಿ ಪಟ್ಟಿ ಜುಲೈ 26 ರ ರಂದು ಪ್ರಕಟಗೊಂಡಿತ್ತು.
ಮಾಧ್ಯಮ, ಸಿನಿಮಾ, ಸಂಗೀತ, ಸಮಾಜಸೇವೆ, ಸಾರ್ವಜನಿಕ ಆಡಳಿತ ಸೇರಿದಂತೆ ವಿವಿಧ ರಂಗದ ಸಾಧಕರನ್ನು ಗುರುತಿಸಿ ಕೆಂಪೇಗೌಡ ಪ್ರಶಸ್ತಿ ನೀಡಲಾಗುತ್ತದೆ.

ಈ ಬಾರಿ ವಿವಿಧ ರಂಗದ 52 ಸಾಧಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿತ್ತು. ಅಶ್ವವೇಗ ಹಿರಿಯ ಮೆಟ್ರೋ ವರದಿಗಾರ ಮಹೇಶ್, ಖ್ಯಾತ ಗಾಯಕಿ ಸಂಗೀತಾ ಕಟ್ಟಿ, ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ, ಸುಪ್ರೀಂ ಕೋರ್ಟ್ ವಕೀಲರಾದ ಶ್ಯಾಮಸುಂದರ್, ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್, ಸಿದ್ಧಯ್ಯ ಸೇರಿದಂತೆ 52 ಸಾಧಕರನ್ನು ಈ ಬಾರಿ ಕೆಂಪೇಗೌಡ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿತ್ತು. ಇಂದು ಸಂಜೆ 6 ಗಂಟೆಗೆ ಬಿಬಿಎಂಪಿ ಗಾಜಿನ ಮನೆಯಲ್ಲಿ ಪ್ರಶಸ್ತಿ ಸಮಾರಂಭ ಹಮ್ಮಿಕೊಂಡಿದೆ.
ವಿಶೇಷ ಎಂದರೆ ಈ ಬಾರಿ “ಅಶ್ವವೇಗ ಹಿರಿಯ ಮೆಟ್ರೋ ವರದಿಗಾರ ಮಹೇಶ್” ಅವರು ಕೂಡ ಕೆಂಪೇಗೌಡ ಪ್ರಶಸ್ತಿಗಾಗಿ ಆಯ್ಕೆಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಯಿಂದ ಪ್ರಶಸ್ತಿ ಸ್ವಿಕರಿಸಿದರು.