Ashwaveega News 24×7 ಮಾರ್ಚ್ 22 – 2026 : ಉಪಚುನಾವಣೆಯ ಹಿನ್ನಲೆಯಲ್ಲಿ ಮೇಟಿ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮಲ್ಲಿಕಾರ್ಜುನ ಮೇಟಿ ತಿಳಿಸಿದ್ದಾರೆ.
ಅಶ್ವವೇಗ ನ್ಯೂಸ್ಗೆ ನೀಡಿದ ಹೇಳಿಕೆಯಲ್ಲಿ, ತಂದೆ ಎಚ್.ವೈ. ಮೇಟಿ ಅವರು ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು .
ಕುಟುಂಬದಲ್ಲಿ ಯಾವುದೇ ಅಸಮಾಧಾನವಿಲ್ಲ. ನಾನು ಟಿಕೆಟ್ಗಾಗಿ ಎಲ್ಲಿಯೂ ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದು, ಉಮೇಶ್ ಮೇಟಿ ಅವರನ್ನು ಗೆಲ್ಲಿಸುವತ್ತ ಶ್ರಮಿಸುತ್ತೇವೆ ಎಂದು ಹೇಳಿದರು.
ಮಹಾದೇವಿ ಮೇಟಿ ಅವರೂ ಸಂಪೂರ್ಣ ಬೆಂಬಲ ನೀಡಿದ್ದು, ಕುಟುಂಬದ ಎಲ್ಲ ಸದಸ್ಯರು ಒಂದಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು .
