ಬೆಂಗಳೂರು: ಮುಂಬರುವ ಗೌರಿ-ಗಣೇಶ್ ಹಬ್ಬಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸಕಲ ಸಿದ್ಧತೆಗಳನ್ನು ನಡೆಸಲು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಂದಾಗಿದೆ. ಈ ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಎಂಟು ವಲಯಗಳಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲು ಪೌರಕಾರ್ಯದರ್ಶಿ ಸೂಚನೆ ನೀಡಿದೆ.
ಪ್ರಥಮ ಬಾರಿ, ಹಬ್ಬದ ಆಚರಣೆಗೆ ಸಮೀಪದ ಕಲ್ಯಾಣಿಗಳ ಬಳಿ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಆನೇಕಡೆ ಆವಘಡ ನಡೆದರೂ ತಕ್ಷಣಕ್ಕೆ ಚಿಕಿತ್ಸೆಯನ್ನು ನೀಡಲು ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ ಸಹ ಹಮ್ಮಿಕೊಳ್ಳಲಾಗಿದೆ.
ಹಬ್ಬದ ನಿರ್ವಹಣೆಗೆ ಸಹಕಾರ ನೀಡಲು ಒಟ್ಟು 63 ಉಪ ವಿಭಾಗ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಸ್ಥಳಗಳಲ್ಲಿ ಬೆಸ್ಕಾಂ, ಅಗ್ನಿಶಾಮಕ, ಜಲಮಂಡಳಿ, ಮತ್ತು ಪೊಲೀಸ್ ಅಧಿಕಾರಿಗಳ ನಿಯೋಜನೆಯೂ ಮಾಡಲಾಗಿದೆ. POP ಗಣೇಶ ಮೂರ್ತಿಗಳ ತಯಾರಿಕಾ ಘಟಕಗಳ ಮೇಲೆ ಹದ್ದಿನ ಕಣ್ಣು ಇಡುವಂತೆ ಸೂಚನೆ ನೀಡಲಾಗಿದೆ. ಮೊಬೈಲ್ ಟ್ಯಾಂಕ್ ವ್ಯವಸ್ಥೆ ಸೇರಿದಂತೆ ಹಲವಾರು ಕ್ರಮಗಳನ್ನು ಜಾರಿಗೆ ತರುವಲ್ಲಿ ಪಾಲಿಕೆ ಕ್ರಮಕೈಗೊಂಡಿದೆ.