Ashwaveega News 24×7 ಮಾರ್ಚ್ 03– 2026 ಬೆಳಗಾವಿ : Belagavi District Courtಗೆ ಬಾಂಬ್ ಬೆದರಿಕೆ ಇಮೇಲ್ ಮೂಲಕ ಬಂದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದ ಕಲಾಪವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಯಿತು.
ಅಪರಿಚಿತ ವ್ಯಕ್ತಿಯಿಂದ ಕಳುಹಿಸಲಾದ ಇಮೇಲ್ ಸಂದೇಶದಲ್ಲಿ ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು, ನ್ಯಾಯಾಲಯದ ಒಳಗೆ ಇದ್ದ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದರು.
ಬೆದರಿಕೆಯ ಹಿನ್ನೆಲೆ ಪೊಲೀಸ್ ಇಲಾಖೆ ಭದ್ರತೆಯನ್ನು ಕಟ್ಟು ನಿಟ್ಟುಗೊಳಿಸಿದ್ದು, ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿಯಿಂದ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಕಾರ್ಯ ನಡೆಸಲಾಗುತ್ತಿದೆ. ಕೋರ್ಟ್ ಕಟ್ಟಡದ ಪ್ರತಿಯೊಂದು ಭಾಗವನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.
ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಸೈಬರ್ ಸಹಾಯ ಪಡೆಯಲಾಗಿದೆ .
