Ashwaveega News 24×7 ಫೆಬ್ರವರಿ 23 – 2026 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ನಗರದ ರಾಜಾನುಕುಂಟೆ ವ್ಯಾಪ್ತಿಯ ವಿಲ್ಲಾದೊಂದರಲ್ಲಿ ಘಟನೆ ನಡೆದಿದೆ . ಸಕಲೇಶಪುರ ಮೂಲದ ನಿಖಿಲ್ ಹಾಗೂ ಪಶ್ಚಿಮ ಬಂಗಾಳ ಮೂಲದ ಡಿಕ್ಸಿನ್ ಎಂಬಾತನ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಪ್ರೇಮಿಗಳ ದಿನದಂದು ಯುವತಿಗೆ ಮದ್ಯ ಅಥವಾ ಮಾತ್ರೆ ನೀಡಿದ ಬಳಿಕ ಇಬ್ಬರೂ ಅತ್ಯಾಚಾರ ಎಸಗಿದ್ದಾರೆ ಎಂಬ ದೂರಿನಲ್ಲಿ ಉಲ್ಲೇಖಿಸಲಾಗಿದೆ .
ಅತ್ಯಾಚಾರದ ಬಳಿಕ ಯುವತಿಗೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ . ಘಟನೆ ಕುರಿತು ಯುವತಿ ನೀಡಿದ ದೂರಿನ ಆಧಾರದಲ್ಲಿ Amruthahalli Police Station ನಲ್ಲಿ ಪ್ರಕರಣ ದಾಖಲಾಗಿದೆ .
ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶ ತನಿಖೆಯಿಂದ ಹೊರಬರಬೇಕಿದೆ .
ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಚರ್ಚೆ ಆರಂಭವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
