
bengaluru money saved for childrens college fees stolen by thieves
ತಮ್ಮ ಹೆಣ್ಣುಮಕ್ಕಳ ಕಾಲೇಜ್ ಫೀಸ್ಗೆ ಇಟ್ಟಿದ್ದ ಹಣವನ್ನು ಖದೀಮರು ಕಳ್ಳತನ ಮಾಡಿರುವ ಘಟನೆಯೊಂದು ಬೆಂಗಳೂರು ಪ್ಯಾಲೇಸ್ ಆವರಣದ ಮನೆಯೊಂದರಲ್ಲಿ ನಡೆದಿದೆ. ಕಳೆದ ದಿನ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದಿರುವಾಗ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀನಿವಾಸ್ ದಂಪತಿ ಕೆಲಸಕ್ಕೆ ಹೋಗಿದ್ದರೆ, ಇತ್ತ ಮಕ್ಕಳು ಕಾಲೇಜಿಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಬಾಗಿಲು, ಬೀರು ಮುರಿದು 65 ಸಾವಿರ ರೂ ಸೇರಿದಂತೆ 5 ಗ್ರಾಂ. ಚಿನ್ನಾಭರಣ ಕಳ್ಳತನ ಮಾಡಿ ಪರಾರಿ ಆಗಿದ್ದಾರೆ.
ಶ್ರೀನಿವಾಸ್ ಅವರು ಸಾಲ ಮಾಡಿ ಮೂವರು ಹೆಣ್ಣು ಮಕ್ಕಳ ಕಾಲೇಜ್ ಫೀಸ್ ಕಟ್ಟುವುದಕ್ಕೆ ಅಂತ ಹಣ ತಂದು ಮನೆಯಲ್ಲಿ ಇಟ್ಟಿದ್ದರು. ಸದ್ಯ ಹಣ ಕಳೆದುಕೊಂಡು ಕಾಲೇಜ್ ಫೀಸ್ ಕಟ್ಟಲಾಗದೆ ಕಂಗಾಲಾಗಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳಿಗೆ ಹುಡುಕಾಟ ನಡೆದಿದೆ.