Ashwaveega News 24×7 ಜನವರಿ 12 – Crime News – ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ಬಲಿಯಾಗಿದೆ.
ಶರ್ಮಿಳಾ (34) ಮೃತ ದುರ್ದೈವಿ. ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು ಅಂತ ತಿಳಿದು ಬಂದಿದೆ
ಜನವರಿ 3ರ ರಾತ್ರಿ ಘಟನೆ ನಡೆದಿದ್ದು, ಜ.5ರಂದು ಬೆಳಕಿಗೆ ಬಂದಿದೆ. ಘಟನೆ ನಡೆದ ದಿನ ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ವಾಸಿಸುತ್ತಿದ್ದ ಫ್ಲ್ಯಾಟ್ನ ರೂಮ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿತ್ತು. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ರೂಮಿನಿಂದ ಹೊರಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿತ್ತು.
ಈ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಯಾರಾದರೂ ಮನೆಗೆ ಬಂದು ಹೋಗಿರಬಹುದಾ ಎಂದು ಅನುಮಾನ ವ್ಯಕ್ತವಾಗಿತ್ತು. ಪೊಲೀಸರ ತನಿಖೆ ವೇಳೆ ಅನುಮಾನಾಸ್ಪದವಾಗಿ ಕಂಡ ಯುವಕ ಕರ್ನಲ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಈ ವೇಳೆ ಇದು ಆಕಸ್ಮಿಕವಲ್ಲ. ಕೊಲೆ ಅನ್ನೋದು ಗೊತ್ತಾಗಿದೆ.
