Ashwaveega News 24×7 ಜನವರಿ 19 – BESCOM – ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ EV ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಹೊಂದಿರುವ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್, ಇತ್ತೀಚೆಗೆ ಬೆಸ್ಕಾಂ ನಿಗಮ ಕಚೇರಿಯಲ್ಲಿ ಈ ವಿಶಿಷ್ಟ ಪೋರ್ಟಲ್ಗೆ ಚಾಲನೆ ನೀಡಿದರು.
ಹೌದು ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ EV ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಮಾಡುವ ವ್ಯವಸ್ಥೆಯನ್ನು ಹೊಂದಿರುವ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ.
ಪೋರ್ಟಲ್ನ ಪ್ರಮುಖ ಉದ್ದೇಶಗಳು
- ಇವಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಮಿಯನ್ನು ಬಾಡಿಗೆಗೆ ನೀಡುವ ಅವಕಾಶಗಳಿಗೆ ಉತ್ತೇಜನ.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಹಾಗೂ ಅನುಮೋದನಾ ಪ್ರಕ್ರಿಯೆ ಪ್ರಗತಿ ಪರಿಶೀಲನೆ ಮಾಡಬೇಕು .
- ಭೂಮಾಲೀಕರು ಸುಲಭವಾಗಿ ನೋಂದಣಿ ಮಾಡಿಕೊಂಡು ತಮ್ಮ ಭೂಮಿಯನ್ನು ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳಿಗೆ ನೀಡುವ ವ್ಯವಸ್ಥೆ ಕಲ್ಪಸಲಾಗುತ್ತೆ .
- ವೆಂಡರ್ಸ್ ಹಾಗೂ ಚಾರ್ಜ್ ಸ್ಟೇಷನ್ ಆಪರೇಟರ್ಗಳು ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಿ ಹಾಗೂ ಅದರ ಕಾರ್ಯಾಚರಣೆಯನ್ನು ನಿರ್ವಹಿಸಬಹುದು…
.
