ಬೆಂಗಳೂರು : ರಾಜಧಾನಿಯಲ್ಲಿ ಇರುವವರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿಗೆ ಬಿಬಿಎಂಪಿ ಮುಂದಾಗಿದೆ.
ಇನ್ನೂ ಮನೆ ಮನೆಯಿಂದ ಕಸ ಸಂಗ್ರಹಿಸಲು ಶುಲ್ಕ ವಸೂಲಿಗೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದ್ದು, 46 ಲಕ್ಷ ಮನೆಗಳಿಂದ 2025 ರಿಂದ ಶುಲ್ಕ ವಸೂಲಿ ಆರಂಭಿಸಲು ಚಿಂತನೆ ನಡೆಸಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, 2025 – 06ನೇ ಆರ್ಥಿಕ ವರ್ಷದಿಂದ ಈ ಮಾದರಿಯ ಶುಲ್ಕ ವಸೂಲಾತಿಗೆ ಬಿಬಿಎಂಪಿಯಿಂದ ಪ್ರಸ್ತಾವನೆ ಹೋಗಿದ್ದು, ಸರ್ಕಾರ ಒಪ್ಪಿಗೆ ನೀಡಿಲ್ಲ.
ಆದರೆ 46 ಲಕ್ಷ ಮನೆಗಳಿಂದ ಪ್ರತಿ ತಿಂಗಳು 200 ರಿಂದ 400 ರೂಪಾಯಿ ಶುಲ್ಕ ನಿಗದಿ ಮಾಡುವ ಪ್ರಸ್ತಾವನೆ ಇದಾಗಿದ್ದು, ಆಸ್ತಿ ತೆರಿಗೆ ಜೊತೆಗೆ ಕಸದ ಶುಲ್ಕವನ್ನ ಸಂಗ್ರಹ ಮಾಡೋದರ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಈಗಾಗಲೇ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಟೆಂಡರ್ ಕರೆದಿದ್ದು, ತ್ಯಾಜ್ಯ ವಿಲೇವಾರಿಯಲ್ಲಿ ಹೊಸ ವ್ಯವಸ್ಥೆ ಜಾರಿಗೆ ತರುವ ಸಂಬಂಧ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಗಮ ಟೆಂಡರ್ ಕರೆದಿದೆ.