Ashwaveega News 24×7 ಜನವರಿ 24 : ಬಿಗ್ಬಾಸ್ ವಿನ್ನರ್ ಗಿಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಎಂಬ ಪ್ರಶ್ನೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಗಿಲ್ಲಿಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆ ಎಂಬ ಮಾತುಗಳು ನೆಟ್ಟಿಗರ ನಡುವೆ ಹಲವು ಅನುಮಾನಗಳಿಗೆ ಕಾರಣವಾಗಿದ್ದವು. ಈ ಎಲ್ಲಾ ಪ್ರಶ್ನೆಗಳನ್ನು ಅಶ್ವವೇಗ ನ್ಯೂಸ್ ಗಿಲ್ಲಿ ಮುಂದಿಟ್ಟಾಗ, ಬಿಗ್ಬಾಸ್ ವಿನ್ನರ್ ಗಿಲ್ಲಿ ಎಕ್ಸ್ಕ್ಲೂಸೀವ್ ಉತ್ತರ ನೀಡಿದ್ದಾರೆ.
“ನನಗೆ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶ ಇಲ್ಲ” ಎಂದು ಗಿಲ್ಲಿ ಸ್ಪಷ್ಟಪಡಿಸಿದ್ದಾರೆ. “ನನ್ನನ್ನು ಕಾಂಗ್ರೆಸ್ ಮಾತ್ರ ಬೆಂಬಲಿಸಿಲ್ಲ. ಎಲ್ಲ ಪಕ್ಷಗಳ ನಾಯಕರಿಂದಲೂ ನನಗೆ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ” ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಎಲ್ಲಾ ನಾಯಕರು ನನ್ನನ್ನು ಅಭಿನಂದಿಸಿದ್ದಾರೆ ಎಂದು ಗಿಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ನಿನ್ನೆ ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿಯನ್ನು ಭೇಟಿ ಮಾಡಿದ್ದ ಗಿಲ್ಲಿ, ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿಯಿಂದಲೂ ಬೆಂಬಲ ಪಡೆದಿದ್ದರು.
ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಗಿಲ್ಲಿಯ ರಾಜಕೀಯ ಭವಿಷ್ಯದ ಬಗ್ಗೆ ವಿವಿಧ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ಎಲ್ಲ ಚರ್ಚೆಗಳಿಗೆ ತೆರೆ ಎಳೆದಿರುವ ಗಿಲ್ಲಿ, “ಜನರ ಪ್ರೀತಿ ಮತ್ತು ಬೆಂಬಲವೇ ನನ್ನ ದೊಡ್ಡ ಶಕ್ತಿ” ಎಂದು ಅಶ್ವವೇಗ ನ್ಯೂಸ್ಗೆ ಎಕ್ಸ್ಕ್ಲೂಸೀವ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ಬಾಸ್ ವಿನ್ನರ್ ಗಿಲ್ಲಿಯ ರಾಜಕೀಯ ಎಂಟ್ರಿ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದೆ.
