
Ashwaveega News 24×7 ಅ. 07: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀಪ್ ಚಾಲಕ 33 ವರ್ಷದ ಬಾಬು ನೇಣಿಗೆ ಶರಣಾಗಿರುವ ಘಟನೆ ಜಿಲ್ಲಾ ಆಡಳಿತ ಭವನದಲ್ಲಿ ನಡೆದಿದೆ.
ಇವರು ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಸಾವಿಗೆ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಇನ್ನೂ ಹಲವರು ಕಾರಣ ಎಂದು ದೂರಿದ್ದು, ರಾಜಕೀಯ ತಿರುವು ಪಡೆದುಕೊಂಡಿದೆ. ಇದೀಗ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಕೆ. ಸುಧಾಕರ್ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ʼಬಾಬು ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ. ಆತನ ಮುಖವನ್ನೇ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ಈ ಸಾವು ನನಗೂ ದುಃಖ ತಂದಿದೆ.
ನಾನು ಎರಡು ಬಾರಿ ಸಚಿವ ಆಗಿದ್ದೇನೆ, ಶಾಸಕ ಆಗಿದ್ದೇನೆ. ಈ ಸಮಯದಲ್ಲಿ ಹಲವರಿಗೆ ಕೆಲಸ ಕೊಡಿಸಿದ್ದೇನೆ. ಎಲ್ಲರ ಪರಿಚಯ ನನಗಿಲ್ಲ. ಈ ವ್ಯಕ್ತಿ ಯಾರೂ ಅಂತ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.