Ashwaveega News 24×7 ಮಾರ್ಚ್ 06 – 2026 : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ಗೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಪರ್ವತದತ್ತ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ಕಟುವಾಗಿ ಟೀಕಿಸಿದೆ .
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಬಿಜೆಪಿ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದೆ . ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದ ಈ ಬಾರಿಯ ಬಜೆಟ್ನಲ್ಲಿ ಸುಮಾರು 1 ಲಕ್ಷ 32 ಸಾವಿರ ಕೋಟಿ ರೂಪಾಯಿ ಸಾಲ ಪಡೆಯುವ ಘೋಷಣೆ ಮಾಡಲಾಗಿದೆ . ಇದರಿಂದ ರಾಜ್ಯದ ಒಟ್ಟು ಸಾಲ ಸುಮಾರು 8 ಲಕ್ಷ 24 ಸಾವಿರ 389 ಕೋಟಿ ರೂಪಾಯಿಗೆ ತಲುಪಲಿದೆ ಎಂದು ಬಿಜೆಪಿ ಹೇಳಿದೆ.
2024–25ನೇ ಸಾಲಿನಲ್ಲಿ ಸುಮಾರು 1 ಲಕ್ಷ 5 ಸಾವಿರ 246 ಕೋಟಿ ರೂಪಾಯಿ ಸಾಲ ಪಡೆಯಲಾಗಿದೆ. 2025–26ನೇ ಸಾಲಿನಲ್ಲಿ ಸುಮಾರು 1 ಲಕ್ಷ 16 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲಾಗಿದೆ ಎಂದು ಬಿಜೆಪಿ ಹೇಳಿದೆ. ಇದೀಗ 2026–27ನೇ ಸಾಲಿನಲ್ಲಿ ಮತ್ತಷ್ಟು 1 ಲಕ್ಷ 32 ಸಾವಿರ ಕೋಟಿ ರೂಪಾಯಿ ಸಾಲ ಪಡೆಯಲು ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಒಟ್ಟಾರೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಗ್ಗೆ ರಾಜಕೀಯ ವಲಯದಲ್ಲಿ ಟೀಕೆ–ಪ್ರತಿಟೀಕೆಗಳು ಜೋರಾಗಿದ್ದು, ಮುಂದಿನ ದಿನಗಳಲ್ಲಿ ಈ ಬಜೆಟ್ ಕುರಿತು ಇನ್ನಷ್ಟು ಚರ್ಚೆಗಳು ನಡೆಯುವ ಸಾಧ್ಯತೆ ಇದೆ .
