
ಬೆಂಗಳೂರು : ಟ್ಯಾನರಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದ್ದು, ಸದ್ಯ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿ ಕೇಸ್ ಮಾಡುವುದಕ್ಕಿಂತ ಶಿಕ್ಷೆ ಮುಖ್ಯ ಎಂದು ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ನಿನ್ನೆ ನಡೆದಿರುವ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. BMTC ಎಂಡಿ ರಾಮಚಂದ್ರನ್, ಪೊಲೀಸ್ ಆಯುಕ್ತರ ಭೇಟಿ ಮಾಡುತ್ತೇನೆ ಎಂದಿದ್ದಾರೆ. ಡ್ರೈವರ್, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು.
ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗುವ ರೀತಿಯಲ್ಲಿ ಮಾಡಬೇಕು. ಜೈಲಿಗೆ ಹೋಗುವ ರೀತಿ ಮಾಡಬೇಕು, ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಹೇಳಿದ್ದಾರೆ. ಇನ್ನೂ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.