Ashwaveega News 24×7 ಏಪ್ರಿಲ್ 9 – 2026 : ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾನ ಚುರುಕುಗೊಂಡಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಇಂದು ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದೆ. ಮತದಾರರು ಉತ್ಸಾಹದಿಂದ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ ಸಮರ್ಥ್ ಮತ್ತು ಶ್ರೀನಿವಾಸ ದಾಸಕರಿಯಪ್ಪ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದರೆ, ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಹಾಗೂ ವೀರಣ್ಣ ಚರಂತಿಮಠ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಅತಿರಥರ ಭರ್ಜರಿ ಕ್ಯಾಂಪೇನ್ ಬಳಿಕ ಇದೀಗ ಅಭ್ಯರ್ಥಿಗಳ ಭವಿಷ್ಯ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (EVM)ನಲ್ಲಿ ಸೀಲ್ ಆಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಈ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಎರಡೂ ಪಕ್ಷಗಳು ಗೆಲುವಿಗಾಗಿ ಶಕ್ತಿಮೀರಿ ಹೋರಾಟ ನಡೆಸಿವೆ.
ಅಶ್ವವೇಗ ನ್ಯೂಸ್ ಗ್ರೌಂಡ್ ರಿಪೋರ್ಟ್ ಪ್ರಕಾರ, ಜಿದ್ದಾಜಿದ್ದಿನ ಈ ಕ್ಷೇತ್ರಗಳಲ್ಲಿ ಮತದಾರರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮತದಾನ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.
ಒಟ್ಟಾರೆ, ಶಾಂತಿಯುತ ವಾತಾವರಣದಲ್ಲಿ ಮತದಾನ ನಡೆಯುತ್ತಿದ್ದು, ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರರು ನಿರ್ಧರಿಸುತ್ತಿದ್ದಾರೆ.
