Ashwaveega News 24×7 ಫೆಬ್ರವರಿ 14 -2026 – ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಚಿಕಿತ್ಸೆ ನೀಡಲಾಗಿದೆ. ಎದೆಬಡಿತ ಹೆಚ್ಚಿದ ಕಾರಣ ಅವರನ್ನು ಬೆಂಗಳೂರಿನ ಜಯದೇಶ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರ ಸಲಹೆ ಮೇರೆಗೆ ಇಂದು ಅವರಿಗೆ ಆಂಜಿಯೋಗ್ರಾಂ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯ ವರದಿ ಬಂದ ನಂತರ ವೈದ್ಯರು ಒಪ್ಪಿಗೆ ನೀಡಿದರೆ, ಅವರನ್ನು ಡಿಸ್ಚಾರ್ಜ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕನನ್ನು ಕೋರ್ಟ್ಗೆ ಹಾಜರುಪಡಿಸಲು ಪೊಲೀಸರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ವೈದ್ಯಕೀಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ …
