
Ashwaveega News 24×7 ಸೆ. 12:ನೂತನ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಗಣತಂತ್ರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪದಗ್ರಹಣ ಮಾಡಿದರು..
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಡ್ಡಾ , ಹೆಚ್.ಡಿ.ಕುಮಾರಸ್ವಾಮಿ, ನಿತಿನ್ ಗಡ್ಕರಿ, ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು..ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಇತ್ತೀಚಿಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರು ಇಂಡಿಯಾ ಮೈತ್ರಿ ಕೂಟದ ಅಭ್ಯರ್ಥಿ ಬಿ.ಸುದರ್ಶನ್ ಅವರನ್ನು 152 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದರು.
ಎನ್ಡಿಎ ಅಭ್ಯರ್ಥಿಯಾಗಿರುವ 67 ವರ್ಷದ ಸಿ.ಪಿ.ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ಅವರು ಸ್ಪರ್ಧಿಸಿದ್ದರು.