ದೆಹಲಿ : ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ರಿಲೀಫ್ ಸಿಕ್ಕಿದ್ದು, ಭವಾನಿಗೆ ಜಾಮೀನು ಅರ್ಜಿ ವಜಾ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೌದು ಸಂತ್ರಸ್ತೆ ಕಿಡ್ನ್ಯಾಪ್ ಕೇಸ್ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್ಐಟಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ್ದಾರೆ.
ಈಗಾಗಲೇ ಚಾರ್ಜ್ಶೀಟ್ ಫೈಲ್ ಆಗಿದ್ದು, ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣ್ತಿಲ್ಲ ಎಂದು ಕೋರ್ಟ್ ತಿಳಿಸಿದೆ.
ಆರೋಪಿ ಮಹಿಳೆ ಪ್ರಕರಣದಲ್ಲಿ ನೇರ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಆಗಿದ್ದಾರೆ. ಸಂತ್ರಸ್ತೆಯ ಅಪಹರಣದಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದಷ್ಟೆ ವಾದ ಎಂದು ತನಿಖೆಯ ಅಗತ್ಯತೆಯನ್ನು ಎಸ್ಐಟಿ ಪರ ವಕೀಲರು ಒತ್ತಿ ಹೇಳಿದರು. ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಚಾರ್ಜ್ಶೀಟ್ ಫೈಲ್ ಮಾಡಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ ಎಂದು ಜಾಮೀನು ರದ್ದು ಮಾಡಲು ಕೋರ್ಟ್ ನಿರಾಕರಿದೆ.
ಇದನ್ನೂ ಓದಿ : https://ashwaveega.com/another-life-threat-to-actor-salman-khan/