Ashwaveega News 24×7 ಮಾರ್ಚ್ 22 – 2026 : ಬಾಗಲಕೋಟೆ: ಹೊನ್ನಾಕಟ್ಟಿ ಚೆಕ್ಪೋಸ್ಟ್ನಲ್ಲಿ ಮಾರೂತಿ ಎರ್ಟಿಗಾ ಕಾರಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು.

ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ತಕ್ಷಣವೇ ಹಣವನ್ನು ಜಪ್ತಿ ಮಾಡಿದ್ದಾರೆ.
ಇದೇ ವೇಳೆ, ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಗೊಂಡಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಅಕ್ರಮ ಹಣ ಸಾಗಾಟವನ್ನು ತಡೆಯಲು ಹಾಗೂ ಮತದಾರರಿಗೆ ಹಣದ ಆಮಿಷ ಒಡ್ಡುವುದನ್ನು ನಿಯಂತ್ರಿಸಲು ವ್ಯಾಪಕ ತಪಾಸಣೆ ಮತ್ತು ನಿಗಾವನ್ನು ಕಠಿಣಗೊಳಿಸಿದೆ.
