Ashwaveega News 24×7 ಮಾರ್ಚ್ 22 – 2026 : ಬಾಗಲಕೋಟೆ: ಉಪಚುನಾವಣೆ ಹಿನ್ನಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಹಣ ಸಾಗಾಟದ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಬಾಗಲಕೋಟೆಯ ಹೊನ್ನಕಟ್ಟಿ ಕ್ರಾಸ್ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
KA-36 P-3991 ಸಂಖ್ಯೆಯ ಮಾರುತಿ ಎರ್ಟಿಗಾ ಕಾರಿನಲ್ಲಿ ಈ ನಗದು ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ವೇಳೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದೆ.
ಹಣಕ್ಕೆ ಸಂಬಂಧಿಸಿದ ಯಾವುದೇ ಸೂಕ್ತ ದಾಖಲೆಗಳನ್ನು ನೀಡದ ಹಿನ್ನೆಲೆಯಲ್ಲಿ ಪೊಲೀಸರು ನಗದನ್ನು ಜಪ್ತಿ ಮಾಡಿದ್ದಾರೆ. ಮಾರುತಿ ಎರ್ಟಿಗಾ ಕಾರಿನಲ್ಲಿದ್ದ ₹32,50,000 ನಗದನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಈ ಸಂಬಂಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಹಣದ ಮೂಲ ಹಾಗೂ ಉದ್ದೇಶದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
