
centre approves bike taxi services
(ಅಶ್ವವೇಗ) Ashwaveega News 24×7 ಜು.02: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧ ಸುದ್ದಿ ಭಾರಿ ಸದ್ದು ಮಾಡಿತ್ತು. ಇದೀಗ ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿ, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದರೂ ಕೂಡ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕು ರಾಜ್ಯ ಸರ್ಕಾರಕ್ಕಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
ಬೈಕ್ ಟ್ಯಾಕ್ಸಿ ಕುರಿತು ಕೇಂದ್ರ ಸರ್ಕಾರದ ನಿರ್ಧಾರದಿಂದ ರಸ್ತೆ ದಟ್ಟಣೆ ಮತ್ತು ವಾಹನ ಮಾಲಿನ್ಯದಿಂದ ತೊಂದರೆಗೀಡಾದ ಜನರಿಗೆ ಹಾಗೂ ದೀರ್ಘಕಾಲದವರೆಗೆ ಕಾನೂನು ಅನಿಶ್ಚಿತತೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದ ರ್ಯಾಪಿಡೊ ಮತ್ತು ಊಬರ್ನಂತಹ ಬೈಕ್ ಟ್ಯಾಕ್ಸಿ ನಿರ್ವಾಹಕರು ನಿಟ್ಟುಸಿರು ಬಿಡುವಂತಾಗಿದೆ.
ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಿದೆ. ಕರ್ನಾಟಕದಲ್ಲಿ ನಿಷೇಧ ಬೆನ್ನಲ್ಲೇ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ಹೈಕೋರ್ಟ್ ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಬಂದ್ ಆಗಿವೆ.
ಈ ಕುರಿತು ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಜೂನ್ 24ಕ್ಕೆ ನಿಗದಿ ಪಡಿಸಿತ್ತು. ಇದೀಗ ಕೇಂದ್ರ ಸರ್ಕಾರದ ನಿರ್ಧಾರದಿಂದ ರಾಜ್ಯ ಸರ್ಕಾರವು ಯಾವ ಕ್ರಮ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.