Ashwaveega News 24×7 ಫೆಬ್ರವರಿ 2026 : ಚಿಕ್ಕಮಗಳೂರು ಜಿಲ್ಲಾ ಸಹಕಾರ ರಾಜಕಾರಣದಲ್ಲಿ ಬಿಜೆಪಿ ಭರ್ಜರಿ ಹಿಡಿತ ಸಾಧಿಸಿದ್ದು, DCC ಬ್ಯಾಂಕ್ ಅಧ್ಯಕ್ಷರಾಗಿ ಸಿ.ಟಿ. ರವಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ರಾಜಕೀಯವಾಗಿ ದೊಡ್ಡ ಸಂದೇಶ ರವಾನೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಭಾವಕ್ಕೆ ಭಾರೀ ಹೊಡೆತ ಬಿದ್ದಿದ್ದು, ಬಿಜೆಪಿಯ ಶಕ್ತಿ ಪ್ರದರ್ಶನಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ.
DCC ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಒಕ್ಕೂಟ ಬಹುತೇಕ ಕ್ಲೀನ್ಸ್ವೀಪ್ ಸಾಧಿಸಿದ್ದು, ಕಾಂಗ್ರೆಸ್ಗೆ ನಿರೀಕ್ಷಿತ ಬೆಂಬಲ ಸಿಗದೇ ಹಿನ್ನಡೆ ಅನುಭವಿಸಿದೆ. ಚಿಕ್ಕಮಗಳೂರು ಸಹಕಾರ ಕ್ಷೇತ್ರದಲ್ಲಿ ಸಿಟಿ ರವಿ ‘ಕಿಂಗ್ಮೇಕರ್’ ಅಲ್ಲ, ನೇರವಾಗಿ ‘ಕಿಂಗ್’ ಆಗಿ ಹೊರಹೊಮ್ಮಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಈ ಚುನಾವಣೆಯಲ್ಲಿ ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ವಿರುದ್ಧ ಗೆಲುವು ಸಾಧಿಸಿದ್ದ ದಿನೇಶ್ಗೆ ಬಿಜೆಪಿ ಬಂಪರ್ ಅವಕಾಶ ನೀಡಿದೆ. ದಿನೇಶ್ ಅವರನ್ನು DCC ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿ, ಪಕ್ಷದೊಳಗಿನ ನಿಷ್ಠೆ ಮತ್ತು ಗೆಲುವಿಗೆ ಗೌರವ ಸಲ್ಲಿಸಿದೆ. ಇದು ಮುಂದಿನ ದಿನಗಳಲ್ಲಿ ಸ್ಥಳೀಯ ರಾಜಕಾರಣದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ.
ಒಟ್ಟಾರೆ DCC ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನ ತಂತ್ರ ಕಾರ್ಯರೂಪಕ್ಕೆ ಬಂದಿದ್ದು, ಕಾಂಗ್ರೆಸ್ಗೆ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಹಿನ್ನಡೆ ಉಂಟಾಗಿದೆ. ಚಿಕ್ಕಮಗಳೂರು ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಸಿಟಿ ರವಿ ಪ್ರಭಾವ ಇನ್ನಷ್ಟು ಗಟ್ಟಿಯಾಗುವ ಲಕ್ಷಣಗಳು ಸ್ಪಷ್ಟವಾಗಿವೆ.
