
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಸಿಲಿಂಡರ್ ಸ್ಪೋಟದಿಂದಾಗಿ ಮಹಾರಾಷ್ಟ್ರದ ಬೀಡ್ ಮೂಲದ ಕೂಲಿ ಕಾರ್ಮಿಕ ಸೂರ್ಯಕಾಂತ ಸೆಳಕೆ (55) ಸಾವಿಗೀಡಾಗಿದ್ದು, ಮತ್ತೋರ್ವ ಕಾರ್ಮಿಕ ಜ್ಞಾನೋದಯಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಕಾರ್ಮಿಕನನ್ನು ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಂಡರ್ ಸ್ಪೋಟದ ತೀವ್ರತೆಯಿಂದ ಪಕ್ಕದ ಮನೆಯ ಗೋಡೆ ಕೂಡ ಕುಸಿದು ಹೋಗಿದೆ, ಈ ಘಟನೆ ಸಮಯದಲ್ಲಿ ಗೋಡೆ ಅವರ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಕ್ಕಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ, ಸ್ಥಳೀಯ ಪೊಲೀಸರು ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ.