
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಕುಂದಲಗುರ ಗ್ರಾಮದಲ್ಲಿ ಮಗನೇ ತನ್ನ ತಂದೆಯನ್ನು ಕೊಲೆಗೈದ ಘಟನೆ ಜರುಗಿದ್ದು, ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ.
ಮಗ ದೇವರಾಜ್ ಎಂಬಾತನಿಂದ ಈ ಕೊಲೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ಮಧ್ಯೆ ಆರಂಭವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಅಬ್ಬಿನಹೊಲೊಳೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.