Ashwaveega News 24×7 ನವೆಂಬರ್. 30: ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ವಿಧಿವಶರಾಗಿದ್ದಾರೆ. ತನ್ನ ವಿಭಿನ್ನ ನಟನೆಯಿಂದಾಗಿ ಜನರನ್ನ ಮನರಂಜಿಸುತ್ತಿದ್ದ ಹಿರಿಯ ಕಲಾವಿದ ಉಮೇಶ್ ಅವರು ಕೊನೆಯುಸಿರೆಳೆದಿದ್ದಾರೆ.
ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ರವರು ಇಂದು ನಿಧನರಾಗಿದ್ದಾರೆ. ಮೈಸೂರಿನವರಾದ ಉಮೇಶ್ರವರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ರಂಗಭೂಮಿಯ ನಟರಾಗಿ, ನಂತರ ಚಲನಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ಸುಮಾರು 900 ಚಿತ್ರಗಳಲ್ಲಿ ಅಭಿನಯಿಸಿದ ಅನುಭವವಿರುವ ಉಮೇಶ್ರವರು ಹಾಸ್ಯನಟರಾಗಿ ಎಲ್ಲರನ್ನು ರಂಜಿಸಿದ್ದರು. 80 ವರ್ಷ ವಯಸ್ಸಿನ ಉಮೇಶ್ ರವರು ಕ್ಯಾನ್ಸರ್ ಕಾಯಿಲೆಗೆ ತುತ್ತಾದ ವೇಳೆ ಅವರ ಕೋರಿಕೆ ಮೇರೆಗೆ ಉಚಿತ ಕ್ಯಾನ್ಸರ್ ಚಿಕಿತ್ಸೆಗೆ ಸರ್ಕಾರದಿಂದ ನೆರವು ನೀಡಲಾಗಿತ್ತು.
ದುರಾದೃಷ್ಟವಶಾತ್ ಆದರೂ ಅವರು ಬದುಕುಳಿಯಲಿಲ್ಲ.
ಉಮೇಶ್ ರವರ ಶ್ರೀಮತಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸುತ್ತೇನೆ. ಕನ್ನಡ ಚಿತ್ರರಂಗ ಮೇರುನಟನನ್ನು ಕಳೆದುಕೊಂಡಿರುವುದು ಅತೀವ ದು:ಖ ತಂದಿದೆ.
ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
