
CM Siddaramaiah Meets Aamir Khan At Rashtrapati Bhavan
ರಾಷ್ಟ್ರಪತಿ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್ ಮುಖಾಮುಖಿಯಾದರು. ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ನವದೆಹಲಿ ತೆರಳಿದ್ದರು.
ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್ ನಟ, ನಿರ್ದೇಶಕ ಮುಖಾಮುಖಿಯಾದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿ, ಶುಭ ಹಾರೈಸಿದರು.
ಸಿಎಂ ಸಿದ್ದರಾಮಯ್ಯ ಅವರು ಸಚಿವರಾದ ಮಹದೇವಪ್ಪ, ಕೆ.ಜೆ ಚಾರ್ಜ್, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯಪಾಲರಿಂದ ಬಂದಿರುವ ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.