
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಹಗರಣದಿಂದ ಮುಕ್ತಿ ಪಡೆಯಲೆಂದು ಅವರ ಅಭಿಮಾನಿಗಳು ಹಾಗೂ ಕುರುಬ ಸಮುದಾಯದ ಮುಖಂಡರು ದೇವರ ಮೊರೆ ಹೋಗಿದ್ದಾರೆ. ಹಾಲುಮತ ಸಮುದಾಯದ ಆರಾಧ್ಯ ದೈವ ದೇವರಗುಡ್ಡದ ಮಾಲತೇಶ ಸ್ವಾಮಿ ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ಸಂಕಷ್ಟ ಹರಣ ಪೂಜೆ ಸಲ್ಲಿಸಲಾಗಿದೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಐತಿಹಾಸಿಕ ಮಾಲತೇಶ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ನಡೆಸಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲತೇಶ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಸಿಎಂ ಬರುವ ಮುನ್ನ ಕುರುಬ ಸಮಾಜದ ಮುಖಂಡರು ಪೂಜೆ ಸಲ್ಲಿಸಿದ್ದು, ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷ ಸಿಎಂ ಆಗಿ ಅಧಿಕಾರದಲ್ಲಿರಲೆಂದು ಪ್ರಾರ್ಥಿಸಿದ್ದಾರೆ.