ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಳ್ಳುತ್ತಿದೆ. ಎಲ್ಲಾ ಆರೋಪಿಗಳನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಅಧಿಕಾರಿಗಳು ತಯಾರಾಗಿದ್ದಾರೆ. ಜೈಲಾಧಿಕಾರಿಗಳು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಾಜರುಪಡಿಸಲಿದ್ದಾರೆ.
ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆಗಾಗಿ 24ನೇ ಎಸಿಎಂಎಂ ಕೋರ್ಟ್ ಮುಂದೆ ಪುನಃ ಮನವಿ ಮಾಡಲಾಗುವುದು. ಈ ವೇಳೆ ಬಳ್ಳಾರಿ ಜೈಲಿನಿಂದ ನಟ ದರ್ಶನ್, ಮೈಸೂರು ಜೈಲಿನಿಂದ ಪವನ್, ರಾಘವೇಂದ್ರ, ನಂದೀಶ್, ಶಿವಮೊಗ್ಗ ಜೈಲಿನಿಂದ ಜಗದೀಶ್-ಲಕ್ಷ್ಮಣ್, ಧಾರವಾಡ ಜೈಲಿನಿಂದ ಧನರಾಜ್, ವಿಜಯಪುರ ಜೈಲಿನಿಂದ ವಿನಯ್, ಕಲಬುರಗಿ ಜೈಲಿನಿಂದ ನಾಗರಾಜ್, ಬೆಳಗಾವಿ ಜೈಲಿನಿಂದ ಪ್ರದೂಷ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ಅನುಕುಮಾರ್, ದೀಪಕ್ ಹಾಜರಾಗಲಿದ್ದಾರೆ.
ತುಮಕೂರು ಜೈಲಿನಲ್ಲಿರುವ ರವಿಶಂಕರ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿಯನ್ನ ಹಾಜರುಪಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಎಲ್ಲ ಆರೋಪಿಗಳ ಹಾಜರಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.