Ashwaveega News 24×7 ಏಪ್ರಿಲ್ 11 – 2026 : ದಾವಣಗೆರೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ಹೊಸ ಬೆಳವಣಿಗೆಯೊಂದು ರಾಜ್ಯ ರಾಜಕೀಯದಲ್ಲೇ ಸಂಚಲನ ಮೂಡಿಸಿದೆ. ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಒಳಗೇ ಅಸಮಾಧಾನ ಸ್ಫೋಟಗೊಂಡಿದ್ದು, ಗಂಭೀರ ಆರೋಪಗಳು ಕೇಳಿಬಂದಿವೆ.
KPCC ಕಾರ್ಯದರ್ಶಿ ಸಲೀಂ ಅಹ್ಮದ್ ಅವರು ನೀಡಿದ ಸಂದರ್ಶನವೊಂದರಲ್ಲಿ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸಮರ್ಥ್ ಅವರನ್ನು ಸೋಲಿಸಲು ಕಾಂಗ್ರೆಸ್ನ ಹಿರಿಯ ಮುಖಂಡರೊಬ್ಬರು ಸಂಚು ರೂಪಿಸಿದ್ದಾರೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ.
ಅವರ ಪ್ರಕಾರ, SDPI ಹಾಗೂ ಮುಸ್ಲಿಂ ಸಮುದಾಯದ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೆಸ್ನವೇ ಒಬ್ಬ ನಾಯಕ ಹಣಕಾಸು ನೆರವು ನೀಡಿರುವ ಸಾಧ್ಯತೆಯಿದೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಆರೋಪದ ಗಂಭೀರತೆ ಹೆಚ್ಚಿಸಿದೆ .
ಆದರೆ, ಈ ಸಂಚಿನಲ್ಲಿ ಭಾಗಿಯಾಗಿರುವ ನಾಯಕ ಯಾರು ಎಂಬುದನ್ನು ಸಲೀಂ ಅಹ್ಮದ್ ಸ್ಪಷ್ಟಪಡಿಸಿಲ್ಲ. ಅವರ ಹೇಳಿಕೆಯಲ್ಲಿ ಪರೋಕ್ಷವಾಗಿ ಕೆಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬರುತ್ತಿದ್ದು, ರಾಜಕೀಯ ವಲಯದಲ್ಲಿ ಊಹಾಪೋಹಗಳು ಜೋರಾಗಿವೆ.
ಈ ಆರೋಪಗಳು ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಬಹಿರಂಗಪಡಿಸುತ್ತಿದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಮತ್ತೊಂದೆಡೆ, SDPI ಹಾಗೂ ಪಕ್ಷೇತರ ಅಭ್ಯರ್ಥಿಗಳಿಗೆ ಹಣಕಾಸು ನೆರವು ನೀಡಲಾಗಿದೆ ಎಂಬ ಆರೋಪ ಸತ್ಯವೇ ಎಂಬುದರ ಬಗ್ಗೆ ಪರಿಶೀಲನೆ ಅಗತ್ಯವಿದೆ.
ಈ ಬೆಳವಣಿಗೆ ದಾವಣಗೆರೆ ಉಪಚುನಾವಣೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಸಲೀಂ ಅಹ್ಮದ್ ಅವರ ಹೇಳಿಕೆ ಇದೀಗ ‘ಟಾಕ್ ಆಫ್ ದಿ ಟೌನ್’ ಆಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಬೆಳವಣಿಗೆಗಳಿಗೆ ವೇದಿಕೆಯಾಗುವ ಸಾಧ್ಯತೆ ಇದೆ.
