
skeleton found during excavation
Ashwaveega News 24×7 ಜು. 31: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ` ಅಶ್ವವೇಗ ನ್ಯೂಸ್ʼ ಗೆ ಎಸ್ಐಟಿ ಮೂಲಗಳು ತಿಳಿಸಿವೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ತಲೆ ಬುರುಡೆ ಸೇರಿದಂತೆ 12 ಮೂಳೆಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಸದ್ಯ ಸಿಕ್ಕಿರುವ ಕಳೇಬರವನ್ನು ಎಸ್ಐಟಿ ಅಧಿಕಾರಿಗಳು ಎಫ್ಎಸ್ಎಲ್ಗೆ ಕಳುಹಿಸಲಿದ್ದಾರೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ.
ಇನ್ನೂ ಎಸ್ಐಟಿ ಅಧಿಕಾರಿಗಳು ಕರ್ನಾಟಕದ ಪ್ರತಿ ಪೊಲೀಸ್ ಠಾಣೆಯಿಂದ ಮಾಹಿತಿ ಕೇಳಿದ್ದು, 1995ರಿಂದ 2005 ಹಾಗೂ 2005ರಿಂದ 2015ವರೆಗೆ ಪತ್ತೆಯಾಗದ ನಾಪತ್ತೆ, ಕೊಲೆ-ಅತ್ಯಾಚಾರ ಪ್ರಕರಣದ ಮಾಹಿತಿ ಒದಗಿಸಲು ತಿಳಿಸಿದೆ. 10 ವರ್ಷಗಳಂತೆ ಎರಡು ಪಟ್ಟಿಯಲ್ಲಿ ಒಟ್ಟು 20 ವರ್ಷದ ದಾಖಲೆ ನೀಡಲು ಎಸ್ಐಟಿ ಅಧಿಕಾರಿಗಳು ಪತ್ರದ ಮೂಲಕ ತಿಳಿಸಿದ್ದಾರೆ.