
Ashwaveega News 24×7 ಅ. 08: ಧರ್ಮಸ್ಥಳದ ಪಾಂಗಳ ಕ್ರಾಸ್ನಲ್ಲಿ ಯೂಟ್ಯೂಬ್ ವಿಡಿಯೋ ಮಾಡುತ್ತಿದ್ದವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಘಟನೆಯ ಬಳಿಕ ಪರ-ವಿರೋಧ ಗುಂಪುಗಳು ಸೇರಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.
ಧರ್ಮಸ್ಥಳದ ನೇತ್ರಾವದಿ ನದಿ ಬಳಿಯಿರುವ ಪಾಂಗಳ ಕ್ರಾಸ್ನಲ್ಲಿ ಯೂಟೂಬ್ ವಿಡಿಯೋ ಮಾಡುತ್ತಿದ್ದವರ ಮೇಲೆ ಸ್ಥಳೀಯರು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ.
ಈ ಪಾಂಗಳ ಗ್ರಾಮ ಧರ್ಮಸ್ಥಳದಲ್ಲಿ ಹತ್ಯೆಗೀಡಾದ ಸೌಜನ್ಯಾಳ ಗ್ರಾಮ ಆಗಿದೆ. ಇಲ್ಲಿ ಯೂಟೂಬರ್ಗಳಾದ ಅಜಯ್, ಅಭಿಷೇಕ್, ಸಂತೋಷ್ ವಿಡಿಯೋ ಶೂಟ್ ಮಾಡುತ್ತಿದ್ದರು. ಆಗ ಸ್ಥಳಕ್ಕೆ ಬಂದ ಸ್ಥಳೀಯರು ಧರ್ಮಸ್ಥಳದ ಪ್ರತಿಷ್ಠಿತ ಕುಟುಂಬವೊಂದರ ಮೇಲೆ ಸುಳ್ಳು ಆರೋಪ ಮಾಡಿ ವಿಡಿಯೋ ಮಾಡುತ್ತಿದ್ದೀರಿ ಎಂದು ಹಲ್ಲೆ ಮಾಡಿದ್ದಾರೆ.
ಮಾತ್ರವಲ್ಲದೆ ಗಾಯಾಳುಗಳನ್ನು ಮಂಗಳೂರು ಹಾಗೂ ಉಜಿರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಭಾಗದಿಂದ ಬಂದ ಜನರು, ಪಾಂಗಳ ಗ್ರಾಮದ ಸೌಜನ್ಯಾ ಮನೆಗೆ ಕಲ್ಲು ತೂರಾಟ ಕೂಡ ನಡೆದಿದೆ ಎನ್ನಲಾಗುತ್ತಿದೆ.