ಧಾರವಾಡ : ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ. ಹಲವು ತಿಂಗಳುಗಳಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಮೂಡಿಸಿದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದು, ತಾಲ್ಲೂಕಿನ ಮಲಕನಕೊಪ್ಪ, ತಬಕದಹೊನ್ನಳ್ಳಿ, ಮುಕ್ಕಲ, ಸುತ್ತಮುತ್ತಲಿನ ಜಮೀನಿನಲ್ಲಿ ಹಾಗೂ ಗುಡ್ಡ ಗಾಡು ಪ್ರದೇಶದಲ್ಲಿ ಓಡಾಡಿರುವ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಅಲ್ಲದೆ ಧನ, ಸಾಕು ನಾಯಿ ತಿಂದ ಬಗ್ಗೆ ಘಟನೆಗಳು ಕೂಡಾ ಜರುಗಿದೆ ಎಂದು ಹೇಳಲಾಗಿದೆ.
ಇನ್ನೂ ಅರಣ್ಯ ಇಲಾಖೆಯ ಸಿಬಂದಿಗಳ ಸತತ ಕಾರ್ಯಾಚರಣೆಯಿಂದ ಚಿರತೆಯನು ಬಂದಿಸಿದ್ದು, ಬೋನಿಗೆ ಬಿದ್ದಿರುವ ಚಿರತೆಯನ್ನು ಕಂಡು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : https://ashwaveega.com/minister-priyank-kharge-against-cbi-it-ed/