Ashwaveega News 24×7 ಏಪ್ರಿಲ್ 6 – 2026 : ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ನಾಯಕರು ಪರಸ್ಪರ ಹೇಳಿಕೆಗಳ ಮೂಲಕ ರಾಜಕೀಯ ಕಿಡಿ ಹಚ್ಚುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಜಮೀರ್ ಅಹ್ಮದ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ನಾನು ಸಿಎಂ ಆಗುವ ವಿಚಾರಕ್ಕೆ ಕಾಲವೇ ಉತ್ತರ ಕೊಡುತ್ತದೆ” ಎಂದು ಸ್ಪಷ್ಟಪಡಿಸಿದರು.
ಇನ್ನಷ್ಟು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಜಮೀರ್ ಸೇರಿದಂತೆ ಬೇರೆ ಯಾರಾದರೂ ನೀಡುವ ಹೇಳಿಕೆಗಳಿಗೆ ನಾನು ಉತ್ತರಿಸುವುದಿಲ್ಲ. ಸಿಎಂ ಪಟ್ಟದ ವಿಚಾರದಲ್ಲಿ ನಾನು ಮತ್ತು ಸಿದ್ದರಾಮಯ್ಯ ಮಾತನಾಡಿದರೆ ಮಾತ್ರ ಅದಕ್ಕೆ ಕಿಮ್ಮತ್ತು ಇರುತ್ತದೆ. ಇತರರ ಹೇಳಿಕೆಗಳು ಗೌಣ” ಎಂದು ಪರೋಕ್ಷವಾಗಿ ಟೀಕಿಸಿದರು.
ಬೈಎಲೆಕ್ಷನ್ ನಂತರ ಪವರ್ ಶೇರಿಂಗ್ ಆಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಎಲ್ಲದರಿಗೂ ಕಾಲವೇ ಉತ್ತರ ಕೊಡಲಿದೆ” ಎಂದು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದರು.
ಈ ಮೂಲಕ ರಾಜ್ಯ ಕಾಂಗ್ರೆಸ್ ಒಳಗಿರುವ ಸಿಎಂ ಕುರ್ಚಿ ವಿಚಾರ ಮತ್ತೆ ಚರ್ಚೆಗೆ ಬಂದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
