Ashwaveega News 24×7 ಮಾರ್ಚ್ 22 – 2026 : ದಾವಣಗೆರೆ ದಕ್ಷಿಣ ಉಪಚುನಾವಣೆಯ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು .
ತಮ್ಮ ಪುತ್ರ ಎಸ್.ಎಂ. ಸಮರ್ಥ್ಗೆ ಕಾಂಗ್ರೆಸ್ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ, ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ನಿವಾಸವಾದ ಸದಾಶಿವನಗರದಲ್ಲಿ ಸಭೆ ನಡೆಯಿತು .
ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ಗಾಗಿ ಮುಸ್ಲಿಂ ಸಮುದಾಯದಿಂದ ಭಾರೀ ಒತ್ತಡ ವ್ಯಕ್ತವಾಗಿದ್ದರೂ, ಕೊನೆಗೂ ಕಾಂಗ್ರೆಸ್ ಪಕ್ಷವು ಎಸ್.ಎಂ. ಸಮರ್ಥ್ಗೆ ಬಿ-ಫಾರಂ ನೀಡಿ ಅಭ್ಯರ್ಥಿಯಾಗಿ ಘೋಷಿಸಿದೆ .
ಟಿಕೆಟ್ ಖಚಿತವಾದ ಹಿನ್ನೆಲೆಯಲ್ಲಿ, ಎಸ್.ಎಸ್. ಮಲ್ಲಿಕಾರ್ಜುನ್ ಅವರು ಪುತ್ರನ ರಾಜಕೀಯ ಭವಿಷ್ಯಕ್ಕೆ ಬಲ ತುಂಬುವ ಉದ್ದೇಶದಿಂದ ಡಿಸಿಎಂ ಜೊತೆ ಚರ್ಚೆ ನಡೆಸಿದ್ದಾರೆ .
ಇದೇ ವೇಳೆ, ಎಸ್.ಎಂ. ಸಮರ್ಥ್ ಅವರು ನಾಳೆ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಕ್ಷೇತ್ರದಲ್ಲಿ ಪ್ರಚಾರ ಕಾರ್ಯವೂ ಚುರುಕುಗೊಂಡಿದೆ .
