ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಈ ನಿರ್ಧಾರವನ್ನು ಕರವೇ ರಾಜ್ಯಾಧ್ಯಕ್ಷ ಟಿಎಸ್ ನಾರಾಯಣಗೌಡ ಸ್ವಾಗತಿಸಿದ್ದಾರೆ. ಈ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದಕ್ಕೆ ಎಲ್ಲ ಕನ್ನಡಪರ ಹೋರಾಟಗಾರರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ. ಕನ್ನಡ ನಾಮಫಲಕ ಹೋರಾಟದ ಸಂದರ್ಭದಲ್ಲಿ ನಾನು 16 ದಿನಗಳ ಜೈಲುವಾಸ ಅನುಭವಿಸಿದ್ದೆ, ಒಂದೇ ದಿನ ನನ್ನಮೇಲೆ 16 ಕೇಸ್ ಹಾಕಲಾಗಿತ್ತು. ಆದರೆ ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ ಸಿದ್ದರಾಮಯ್ಯನವರು ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದಿದ್ದು ನಮ್ಮ ಹೋರಾಟಕ್ಕೆ ಪ್ರತಿಫಲ ಸಿಕ್ಕಿತ್ತು. ಅದೇ ರೀತಿ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ತಡೆಯುವ ಹೋರಾಟವೂ ಯಶಸ್ವಿಯಾಗಿದ್ದು ಸಿದ್ದರಾಮಯ್ಯ ಅವರ ದಿಟ್ಟ ನಿರ್ಧಾರದಿಂದ ಎಂದು ನಾರಾಯಣಗೌಡ ಹೇಳಿದ್ದಾರೆ. ಅವರ ಅವಧಿಯಲ್ಲಿ ಇನ್ನಷ್ಟು ಕೆಲಸ ಆಗಬೇಕಿದೆ ಕನ್ನಡಿಗರ ಬದುಕನ್ನ ಹೊರ ರಾಜ್ಯದಿಂದ ಬಂದವರು ಕಿತ್ತುಕೊಳ್ಳುತ್ತಿದ್ದಾರೆ. ಅನೇಕ ಕ್ಷೇತ್ರದ ಉದ್ಯೋಗಗಳು ಕನ್ನಡಿಗರ ಕೈ ತಪ್ಪುತ್ತಿವೆ. ಇದನ್ನ ತಪ್ಪಿಸಲು ಕಠಿಣವಾದ ಕಾಯ್ದೆ ಒಂದು ಬೇಕಿದೆ ಎಂದು ಕರವೇ ನಾರಾಯಣ ಗೌಡ ಹೇಳಿದ್ದಾರೆ..
