
ಮೈಸೂರು : ಪರಿಚಿತ ಮುಸುಕಿನ ವ್ಯಕ್ತಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಚಾಕುವಿನಿಂದ ಇರಿದು ಆರೋಪಿ ಪರಾರಿಯಾಗಿದ್ದಾನೆ.
ಈ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ನರಸೀಪುರ ಪಟ್ಟಣದ ಭಗವಾನ್ ಟಾಕೀಸ್ ವೃತ್ತದಲ್ಲಿ ನಡೆದಿದ್ದು, ದಿನಕರ್ (35) ವರ್ಷ ಯುವಕ ಹಲ್ಲೆಗೊಳಗಾಗಿದ್ದಾನೆ. ಈ ವೇಳೆ ಯುವಕ ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು, ಯುವಕ ರಾತ್ರಿ ರಸ್ತೆಯಲ್ಲಿ ಬರುವಗ ಈ ವೇಳೆ ಮುಸುಕು ಧರಿಸಿಕೊಂಡು ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ಮಾಡಿ ಬಳಿಕ ಅಲ್ಲಿಂದ ಆರೋಪಿ ಪರಾರಿಯಾಗಿದ್ದಾನೆ. ಇನ್ನೂ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು ಆರೋಪಿಗಾಗಿ ಬಲೆ ಬೀಸಿದ್ದಾರೆ.