ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟಿ ರನ್ಯಾ ರಾವ್ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ FIR ದಾಖಲಾಗಿದೆ. ಸದ್ಯ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ರನ್ಯಾ ರಾವ್ ವಿರುದ್ದ ಅವಾಚ್ಯ ಪದ ಬಳಸಿ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಮಹಿಳೆಯ ವಿರುದ್ದ ಅವಾಛ್ಯ ಪದ ಬಳಕೆ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹೈ ಗ್ರೌಂಡ್ ಪೋಲಿಸರಿಗೆ ಅನುರಾಧ ಎಂಬುವರು ದೂರು ನೀಡಿದ್ದರು. ಹೀಗಾಗಿ ಪೊಲೀಸರು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಹಲವು ಸಚಿವರ ಕೈವಾಡವಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು.

ಅಭಿಷೇಕ್.ಎಸ್