
firing gunshots in the air during birthday celebration
ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯನಿಂದ ಗೂಂಡಾವರ್ತನೆ ತೋರಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ನನ್ನು ಬಂಧಿಸಿದ್ದಾರೆ.
ನಗರದಲ್ಲಿ ಎರಡು ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಡೋಂಟ್ಕೇರ್.
ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್ರನ್ನು ಪೊಲೀಸರು ಬಂಧಿಸಿದ್ದಾರೆ.