
Ashwaveega News 24×7 ಅ. 02: ಪ್ರಥಮ ಬಾರಿಗೆ, ನಮ್ಮ ಮೆಟ್ರೋದಲ್ಲಿ ದೇಣಿಗೆಯಾದ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಯಶಸ್ವಿಯಾಗಿ ಸಾಗಿಸಲಾಯಿತು. ಶುಕ್ರವಾರ (ಆ.1) ರಾತ್ರಿ 8:38ಕ್ಕೆ ವೈದೇಹಿ ಆಸ್ಪತ್ರೆಯ ಓರ್ವ ವೈದ್ಯ ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿ ಯಕೃತ್ತನ್ನು ತೆಗೆದುಕೊಂಡು ವೈಟ್ಫಿಲ್ಡ್ ಮೆಟ್ರೋ ನಿಲ್ದಾಣಕ್ಕೆ ಅಂಬ್ಯುಲೆನ್ಸ್ನಲ್ಲಿ ಸುರಕ್ಷಿತವಾಗಿ ಬಂದರು.
ವೈದ್ಯರ ತಂಡ ಮೆಟ್ರೋ ನಿಲ್ದಾಣಕ್ಕೆ ತಲುಪಿದ ತಕ್ಷಣ, ಸಹಾಯಕ ಭದ್ರತಾ ಅಧಿಕಾರಿ ಮತ್ತು ಮೆಟ್ರೋ ಸಿಬ್ಬಂದಿ ತಂಡವನ್ನು ಸ್ವಾಗತಿಸಿ, ದಾಖಲೆ ಪರಿಶೀಲನೆ ನಡೆಸಿ ಬಳಿಕ ಭದ್ರತೆಯನ್ನು ಒದಗಿಸಿದರು.
ಆ ಬಳಿಕ, ಯಕೃತ್ತನ್ನು ಹೊತ್ತ ಮೆಟ್ರೋ ರೈಲು ರಾತ್ರಿ 8:42ಕ್ಕೆ ವೈಟ್ಫಿಲ್ಡ್ ನಿಲ್ದಾಣದಿಂದ ಹೊರಟು, ರಾತ್ರಿ 9.48ಕ್ಕೆ ರಾಜರಾಜೇಶ್ವರಿ ನಗರ (RR ನಗರ) ಮೆಟ್ರೋ ನಿಲ್ದಾಣಕ್ಕೆ ತಲುಪಿತು. ಅಲ್ಲಿ ಮತ್ತೊಬ್ಬ ASO ಮತ್ತು ಮೆಟ್ರೋ ಸಿಬ್ಬಂದಿ ವೈದ್ಯಕೀಯ ತಂಡವನ್ನು ಸ್ವಾಗತಿಸಿ, ಕಾಯುತ್ತಿರುವ ಅಂಬ್ಯುಲೆನ್ಸ್ಗೆ ಯಕೃತ್ತನ್ನು ವರ್ಗಾವಣೆ ಮಾಡುವಲ್ಲಿ ನೆರವಾದರು.
ಅಂಗಾಂಗ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಸಮಯಕ್ಕೆ ಅಂಗವನ್ನು ಸ್ಪರ್ಶ ಆಸ್ಪತ್ರೆಗೆ ಸುರಕ್ಷಿತವಾಗಿ ತಲುಪಿಸಲಾಯಿತು.
ಈ ಜೀವ ಉಳಿಸುವ ಕಾರ್ಯಾಚರಣೆಯಲ್ಲಿ ಸಮಯೋಚಿತ ಸಹಕಾರ ಮತ್ತು ಜವಾಬ್ದಾರಿ ತೋರ್ಪಡಿಸಿದ ಸಹಾಯಕ ಭದ್ರತಾ ಅಧಿಕಾರಿಗಳು, ಹೋಮ್ ಗಾರ್ಡುಗಳು ಮತ್ತು ಮೆಟ್ರೋ ಸಿಬ್ಬಂದಿಗೆ ವೈದ್ಯಕೀಯ ತಂಡದವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.