ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೌದು ಮತ್ತೆ ಮಾಜಿ ಮುಖ್ಯಮಂತ್ರಿ, ಎಸ್ಎಮ್ ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರೆದಿದೆ. ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ : https://ashwaveega.com/traffic-ban-on-these-roads-of-bangalore-for-2-days/