
Former J-K Governor Satyapal Malik passes away at 79
Ashwaveega News 24×7 ಅ. 05: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರದ 79 ವರ್ಷದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮಂಗಳವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮಧ್ಯಾಹ್ನ 1.10 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಮಲಿಕ್ ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ 10 ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.
ಅವರ ಅಧಿಕಾರಾವಧಿಯಲ್ಲಿಯೇ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿತು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಹಾಗೂ ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.
ಐದು ದಶಕಗಳಿಗೂ ಹೆಚ್ಚು ಕಾಲ ವಿವಿಧ ಪಕ್ಷಗಳಲ್ಲಿ ಮತ್ತು ವಿವಿಧ ರಾಜ್ಯಗಳಲ್ಲಿ ತಮ್ಮ ರಾಜಕೀಯ ಜೀವನ ನಡೆಸಿದ್ದಾರೆ. ಮಲಿಕ್, ಮೊದಲು ಮಾಜಿ ಪ್ರಧಾನಿ ಚರಣ್ ಸಿಂಗ್ ಸ್ಥಾಪಿಸಿದ ಭಾರತೀಯ ಕ್ರಾಂತಿ ದಳದೊಂದಿಗೆ ಬಾಗ್ಪತ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.