Ashwaveega News 24×7 ಮಾರ್ಚ್ 12 – 2026 : ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಹೋಟೆಲ್ಗಳು ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಗದ ಕಾರಣ ಒಂದೊಂದೇ ಹೋಟೆಲ್ಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ.
ಮಲ್ಲೇಶ್ವರದ ಪ್ರಸಿದ್ಧ ಹೋಟೆಲ್ಗಳಲ್ಲಿ ಒಂದಾದ ಶ್ರೀ ಕೃಷ್ಣ ರಜತಾದ್ರಿ ಕೂಡ ಗ್ಯಾಸ್ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಇರುವ ಈ ಹೋಟೆಲ್ ಕಮರ್ಷಿಯಲ್ ಸಿಲಿಂಡರ್ ಸಿಗದ ಕಾರಣದಿಂದ ಬಾಗಿಲು ಮುಚ್ಚಬೇಕಾದ ಪರಿಸ್ಥಿತಿ ಎದುರಾಗಿದೆ.
ಗ್ಯಾಸ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹೋಟೆಲ್ ಮಾಲೀಕರು ಹಾಗೂ ಕಾರ್ಮಿಕರು ಆತಂಕದಲ್ಲಿದ್ದಾರೆ. ಅಡುಗೆಗೆ ಅಗತ್ಯವಾದ ಕಮರ್ಷಿಯಲ್ ಸಿಲಿಂಡರ್ಗಳು ಲಭ್ಯವಾಗದ ಕಾರಣ ವ್ಯಾಪಾರ ಸಂಪೂರ್ಣ ಅಯೋಮಯವಾಗಿದೆ ಎಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ.
ಇದರಿಂದ ಗ್ರಾಹಕರಿಗೂ ತೊಂದರೆ ಉಂಟಾಗಿದ್ದು, ನಗರದಲ್ಲಿ ಇನ್ನೂ ಕೆಲವು ಹೋಟೆಲ್ಗಳು ಕೂಡ ಇದೇ ಕಾರಣದಿಂದ ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
