ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿದೆ. ಪರ್ತ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಇತ್ತ ರೋಹಿತ್ ಶರ್ಮಾ ಆಗಮನದೊಂದಿಗೆ ಕೆಎಲ್ ರಾಹುಲ್ ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆ ಮೂಡಿತ್ತು.
ಈ ಪ್ರಶ್ನೆಗೆ ಖುದ್ದು ಕೆಎಲ್ ರಾಹುಲ್ ಉತ್ತರ ನೀಡಿದ್ದಾರೆ. ಅಡಿಲೇಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಕೆಎಲ್ಆರ್, ನಾನು ತಂಡಕ್ಕಾಗಿ ಯಾವುದೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧ . ನಾನು ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿರಲು ಬಯಸುತ್ತೇನೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.