Ashwaveega News 24×7 ಡಿಸೆಂಬರ್. 22: ದ್ವೇಷ ಭಾಷಣ ವಿರೋಧಿ ಮಸೂದೆ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತಾಗಿದೆ ಅಂತ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಂಗೀಕರಿಸಿರುವ ದ್ವೇಷ ಭಾಷಣ ವಿರೋಧಿ ಮಸೂದೆ ತುರ್ತು ಪರಿಸ್ಥಿತಿಗಿಂತ ಘೋರವಾದುದು, ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದ ಇಂದಿರಾ ಗಾಂಧಿ ಸರ್ಕಾರವನ್ನು ರಾಷ್ಟ್ರಭಕ್ತರು ಕಿತ್ತೊಗೆದಿದ್ದರು, ಈಗ ದ್ವೇಷ ಭಾಷಣ ವಿರೋಧಿ ಮಸೂದೆಯಿಂದ ಆಗುವ ಪರಿಣಾಮಗಳನ್ನು ಸಹಾ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಭವಿಸುತ್ತೆ.
ಈ ಮಸೂದೆಯು ಹಿಂದೂ ನಾಯಕರನ್ನು, ಹಿಂದೂ ಸಂಘಟನೆಗಳನ್ನು ಹತ್ತಿಕ್ಕಲು ತಂದಿರುವ ಕರಾಳ ಶಾಸನ ಅಂತ ಸರ್ಕಾರ ವಿರುದ್ಧ ವಾಗ್ದಾಳಿ ನಡಸಿದರು…ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುವುದು ದ್ವೇಷದ ಘೋಷಣೆಯಾಗಿ ಕೇಳುವುದಿಲ್ಲ , ರಾಷ್ಟ್ರೀಯ ವಿಚಾರಗಳನ್ನು ಪ್ರತಿಪಾದಿಸುವುದು ರಾಷ್ಟ್ರದ್ರೋಹದ ಕೆಲಸ ಎಂಬುದು ಕಾಂಗ್ರೆಸ್ ನಿಲುವು, ಈ ಮಸೂದೆ ವಿರುದ್ಧ ಇಡೀ ಹಿಂದೂ ಸಮಾಜ ಹೋರಾಡಲಿದೆ ಅಂತ ಕಾಂಗ್ರೆಸ್ ವಿರುದ್ಧ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಗುಡುಗಿದರು.
