
today 3 peoples suffered cardiac arrest
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಾಗುತ್ತಿರುವ ಪ್ರಕರಣಗಳು ನಿಲ್ಲುತ್ತಿಲ್ಲ. ಇಂದು (ಜೂನ್ 30) ಮತ್ತೆ ಮೂವರು ಹಾರ್ಟ್ ಅಟ್ಯಾಕ್ಗೆ ಬಲಿಯಾಗುವ ಮೂಲಕ ವಾರದಲ್ಲಿ 9 ಜನ ಸೇರಿ, ಕಳೆದ 35 ದಿನಗಳಲ್ಲಿ ಮೃತರ ಸಂಖ್ಯೆ 22ಕ್ಕೆ ಏರಿದೆ.
ಜಿಲ್ಲೆಯ ಬೇಲೂರು ಪಟ್ಟಣದ ಜೆ.ಪಿ. ನಗರದಲ್ಲಿ ಗೃಹಿಣಿ ಲೇಪಾಕ್ಷಿ (50) ಎಂಬವರು ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮನೆಯಲ್ಲಿರುವಾಗ ಲೇಪಾಕ್ಷಿ ಅವರು ಸುಸ್ತು ಎಂದು ತಿಳಿಸಿದ್ದು, ಕೂಡಲೇ ಕುಟುಂಬಸ್ಥರು ಅವರನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಷ್ಟರಲ್ಲಿ ಲೇಪಾಕ್ಷಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಲೇಪಾಕ್ಷಿ ಅವರ ಪತಿ ನಾಗರಾಜು ಅವರು ಪಟ್ಟಣದಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಿದ್ದಾರೆ.
ಎರಡನೇ ಪ್ರಕರಣದಲ್ಲಿ ಹೊಳೆನರಸೀಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಭಾಷಾ ಉಪನ್ಯಾಸಕ ಮುತ್ತಯ್ಯ (58) ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಚನ್ನರಾಯಪಟ್ಟಣದ ನಿವಾಸಿಯಾಗಿದ್ದ ಮುತ್ತಯ್ಯ ಅವರು, ಇಂದು ಬೆಳಗ್ಗೆ ಕಾಲೇಜಿಗೆ ಬಂದ ವೇಳೆ ಹೊಳೆನರಸೀಪುರ ಬೈಪಾಸ್ ರಸ್ತೆಯಲ್ಲಿ ಟೀ ಕುಡಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟೊತ್ತಿಗಾಗಲೇ, ಮುತ್ತಯ್ಯ ಅವರ ಎದೆಬಡಿತ ನಿಂತು ಹೋಗಿ ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೂರನೇ ಪ್ರಕರಣದಲ್ಲಿ ಚನ್ನರಾಯಪಟ್ಟಣ ತಾಲೂಕಿನ ಡಿ-ಗ್ರೂಪ್ ನೌಕರ ಕುಮಾರ್ (57) ಅವರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ತಾಲ್ಲೂಕಿನ ನುಗ್ಗೇಹಳ್ಳಿ ನಾಡ ಕಚೇರಿಯಲ್ಲಿ ಡಿ ಗ್ರೂಪ್ ನೌಕರರಾಗಿದ್ದ ಕುಮಾರ್ ಅವರು ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಸೋಮವಾರ) ಅವರು ಖಾಸಗಿ ಆಸ್ಪತ್ರೆಯಲ್ಲಿ