Ashwaveega News 24×7 ನವೆಂಬರ್. 11: ಬಾಲಿವುಡ್ನ ಹೀಮ್ಯಾನ್ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ ಧರ್ಮೇಂದ್ರ ತಮ್ಮ 89ನೇ ವಯಸ್ಸಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ ಅನ್ನೋ ಸುದ್ದಿ ಮಂಗಳವಾರ ವ್ಯಾಪಕವಾಗಿ ಹಬ್ಬಿತ್ತು. ಆದರೆ, ಅವರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿದೆ. ಪುತ್ರಿ ಇಶಾ ಡಿಯೋಲ್ ಹಾಗೂ ಪತ್ನಿ ಹೇಮಾ ಮಾಲಿನಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡು ಧರ್ಮೇಂದ್ರ ನಿಧನದ ಸುದ್ದಿಯನ್ನು ತಳ್ಳಿಹಾಕಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ಅಸುನೀಗಿದ್ದಾರೆ ಎಂದು ವರದಿಯಾಗಿತ್ತು. ಸೋಮವಾರ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣಕ್ಕೆ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ಆಗಲೇ ಅವರ ನಿಧನದ ಸುದ್ದಿಗಳು ಹಬ್ಬಿದ್ದವು. ಆದರೆ, ಧರ್ಮೇಂದ್ರ ಅವರ ಪುತ್ರ ಸನ್ನಿ ಡಿಯೋಲ್, ಪತ್ನಿ ಹೇಮಾ ಮಾಲಿನಿ ಅವರು ಸೋಶಿಯಲ್ ಮೀಡಿಯಾ ಟೀಮ್ ಈ ಸುದ್ದಿಯನ್ನು ತಳ್ಳಿಹಾಕಿದ್ದವು.
`ಈ ರೀತಿ ಆಗುತ್ತಿರುವುದು ಕ್ಷಮೆಗೆ ಅರ್ಹವಾದುದಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಗೆ ಸರಿಯಾದ ಗೌರವವನ್ನು ನೀಡಿ’ ಎಂದು ಹೇಮಾಮಾಲಿನಿ ಆಕ್ರೋಶದಿಂದ ಟ್ವೀಟ್ ಮಾಡಿದ್ದಾರೆ. ಸದ್ಯ ನಟ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
