
Ashwaveega News 24×7 ಸೆ. 16: ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಆದರೆ ಬಳಿಕ ತನ್ನದೇ ಆದೇಶವನ್ನು ಅಮಾನತಿನಲ್ಲಿಟ್ಟಿದ್ದು, ನಂಜೇಗೌಡಗೆ ಕೊಂಚ ಮಟ್ಟಿಗೆ ನಿರಾಳತೆ ಸಿಕ್ಕಿದೆ.
ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಎದುರು ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ 248 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಆಗಲೇ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಎರಡು ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್ ಇದೀಗ ಕೆ.ವೈ.ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಅಲ್ಲದೇ 4 ವಾರಗಳಲ್ಲಿ ಮರು ಮತಎಣಿಕೆ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾ ಚುನಾವಣಾಧಿಕಾರಿ ಮತಎಣಿಕೆ ವಿಡಿಯೋ ಸಲ್ಲಿಸಿಲ್ಲ ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕ್ಕೂ ಸೂಚನೆ ನೀಡಿದೆ. ಆ ಬಳಿಕ ಕೆ.ವೈ.ನಂಜೇಗೌಡ ಪರ ವಕೀಲರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದು, ಆದೇಶವನ್ನು 30 ದಿನ ಆದೇಶ ಅಮಾನತಿನಲ್ಲಿಡಲು ಹೈಕೋರ್ಟ್ಗೆ ಮನವಿ ಮಾಡಿದ್ದು, ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಅಮಾನತ್ತಿನಲ್ಲಿಟ್ಟಿದೆ.
ಇನ್ನೂಈ ಬಗ್ಗೆ ಮಾಲೂರು ಶಾಸಕ ನಂಜೇಗೌಡ ಪ್ರತಿಕ್ರಿಯಿಸಿ, ಹೈಕೋರ್ಟ್ ಆದೇಶ ಅಚ್ಚರಿ ತಂದಿದೆ. ನಾನೀಗ ಹಿರಿಯ ವಕೀಲರೊಂದಿಗೆ ಮಾತನಾಡುತ್ತೇನೆ. ಮರು ಎಣಿಕೆಗೆ ಆದರೇ ನನಗೆ ಗೆಲ್ಲವು ವಿಶ್ವಾಸ ಇದೆ ಎಂದಿದ್ದಾರೆ.