Ashwaveega News 24×7 ಮಾರ್ಚ್ 13– 2026 : ಶಿವಮೊಗ್ಗ: ಹೋಟೆಲ್ಗಳಲ್ಲಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಬಳಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಶಿವಮೊಗ್ಗದಲ್ಲಿ ದಾಳಿ ನಡೆಸಿದ್ದಾರೆ.
ಯುದ್ಧ ಪರಿಸ್ಥಿತಿಯ ಪರಿಣಾಮದಿಂದ ಗ್ಯಾಸ್ ಸಿಲಿಂಡರ್ಗಳ ಅಭಾವ ಉಂಟಾಗಿದೆ ಎನ್ನಲಾಗುತ್ತಿದ್ದು, ಕೆಲವು ಹೋಟೆಲ್ಗಳಲ್ಲಿ ಗೃಹ ಬಳಕೆಯ ಸಿಲಿಂಡರ್ಗಳನ್ನು ವಾಣಿಜ್ಯ ಬಳಕೆಗೆ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಸಹಾಯಕ ನಿರ್ದೇಶಕಿ ಲಕ್ಷ್ಮಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದ ಬಳಿ ಇರುವ ವಿಧಾತ್ರಿ ಕೆಫೆ ಮೇಲೆ ದಾಳಿ ನಡೆಸಿತು .
ದಾಳಿಯ ವೇಳೆ ಹೋಟೆಲ್ನಲ್ಲಿ ಬಳಸಲಾಗುತ್ತಿದ್ದ 3 ಗೃಹ ಬಳಕೆಯ ಸಿಲಿಂಡರ್ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ LPG ಆಕ್ಟ್ 2000 ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಟೆಲ್ಗಳಲ್ಲಿ ಗೃಹ ಬಳಕೆಯ ಸಿಲಿಂಡರ್ಗಳ ದುರುಪಯೋಗದ ವಿರುದ್ಧ ಮುಂದುವರಿದ ದಿನಗಳಲ್ಲೂ ತಪಾಸಣೆ ಮುಂದುವರಿಸಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
