ಬೆಳಗಾವಿ : ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ರು. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಾತನಾಡಿದ ಅವರು, ಇನ್ನೂ 15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಚಿವ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ಮತ್ತು ಲಕ್ಷ್ಮಣ್ ಸವದಿ ಅವರ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ.
ಇನ್ನೂ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿನಯ್ ಕುಲಕರ್ಣಿ, ಈ ಕುರಿತು ಚರ್ಚಿಸಲು ಸಭಾಪತಿಗಳ ಬಳಿ ಸಮಯ ಕೇಳಿದ್ದೇವೆ. ಹೋರಾಟದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದ್ದಾರೆ.