Ashwaveega News 24×7 ಸೆ. 28: 2025ರ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಬದ್ಧವೈರಿ ಪಾಕಿಸ್ತಾನ ಮೊದಲ ಬ್ಯಾಟಿಂಗ್ ಮಾಡಲಿದೆ.
ದುಬೈ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ನ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಟಾಸ್ ಗೆದ್ದು ಮೊದಲ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಸಲ್ಮಾನ್ ಅಲಿ ಆಘಾ ನೇತೃತ್ವದ ಪಾಕಿಸ್ತಾನ ತಂಡ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದೆ.
ಈ ಟೂರ್ನಿಯಲ್ಲಿ ಈ ಮೊದಲೇ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ಗ್ರೂಪ್ ಸ್ಟೇಜ್ನಲ್ಲಿ ಮುಖಾಮುಖಿ ಆಗಿದ್ದವು. ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೂರ್ಯಕುಮಾರ್ ಪಡೆ ಗೆಲುವು ಪಡೆದಿತ್ತು. ಇದಾದ ಮೇಲೆ ಸೂಪರ್-4 ರಲ್ಲೂ ಭಾರತ ಗೆದ್ದಿತ್ತು. ಈಗ ಪಾಕಿಸ್ತಾನ ವಿರುದ್ಧ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ ಇದೆ.
ದುಬೈ ಕ್ರೀಡಾಂಗಣಕ್ಕೆ ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡ ಇಳಿದಿದ್ದು ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್ ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಕ್ರೀಸ್ಗೆ ಆಗಮಿಸಲಿದ್ದಾರೆ. ಸೂರ್ಯಕುಮಾರ್ ಎಂದಿನಂತೆ ತಮ್ಮ ಸ್ಲಾಟ್ 3ನೇ ಬ್ಯಾಟರ್ ಆಗಿ ಮೈದಾನಕ್ಕೆ ಬರಲಿದ್ದಾರೆ. ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ತಂಡದಲ್ಲಿ ಯಾವ ಸ್ಥಾನದಲ್ಲಿ ಕ್ರೀಸ್ಗೆ ಬರುತ್ತಾರೆ ಎಂದು ಹೇಳಲಾಗುವುದಿಲ್ಲ. ಏಕೆಂದರೆ ಈ ಮೊದಲಿನ ಸ್ಥಾನದಲ್ಲಿ ಬೇರೆ ಬೇರೆ ಸ್ಲಾಟ್ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಬ್ಯಾಟಿಂಗ್ ಕಣ್ಣಿಗೆ ಹಬ್ಬವನ್ನುಂಟು ಮಾಡಲಿದೆ.
ಇಂದಿನ ಫೈನಲ್ ಪಂದ್ಯದಲ್ಲಿ ಮುಖ್ಯ ಬದಲಾವಣೆ ಎಂದರೆ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯರನ್ನ ಹೊರಗಿಡಲಾಗಿದೆ. ಪಾಂಡ್ಯ ಬದಲಿಗೆ ಯಂಗ್ ಬ್ಯಾಟರ್ ರಿಂಕು ಸಿಂಗ್ಗೆ ಚಾನ್ಸ್ ನೀಡಲಾಗಿದೆ. ಇನ್ನೊಬ್ಬ ಆಲ್ರೌಂಡರ್ ಅಕ್ಷರ್ ಪಟೇಲ್, ಶಿವಂ ದುಬೆ ತಂಡದ ಶಕ್ತಿಯಾಗಿ ಹೊರ ಹೊಮ್ಮುವುದು ಅವಶ್ಯಕವಾಗಿದೆ.
ನಾಯಕ ಸೂರ್ಯಕುಮಾರ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಬಲಿಷ್ಠವಾಗಿದೆ. ವರುಣ್ ಚಕ್ರವರ್ತಿ ಎದುರಾಳಿಗಳಿಗೆ ಕಾಡುವುದು ದಟ್ಟವಾಗಿದೆ. ಪಾಕಿಸ್ತಾನದ ವಿರುದ್ಧ ಸ್ಪಿನ್ನರ್ ಕುಲ್ದೀಪ್ ಯಾದವ್ ದೊಡ್ಡ ಮ್ಯಾಜಿಕ್ ಮಾಡಿದರೆ ಗೆಲುವು ಸುಲಭ.
ಟೀಮ್ ಇಂಡಿಯಾ ಪ್ಲೇಯಿಂಗ್- 11
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.
