ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟಿ 20 ಪಂದ್ಯ ರಾಜ್ಕೋಟ್ನಲ್ಲಿ ನಡೆಯಲಿದೆ. ಸರಣಿಯಲ್ಲಿ 2-0 ಅಂತರದಿಂದ ಮುಂದಿರುವ ಭಾರತ ಈ ಪಂದ್ಯವನ್ನ ಗೆದ್ದು ಸರಣಿ ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ಇಂಗ್ಲೆಂಡ್ ಕಳೆದ ಪಂದ್ಯದಲ್ಲಿ ಆಡಿಸಿದ್ದ ತಂಡವನ್ನೇ ಈ ಪಂದ್ಯದಲ್ಲೂ ಆಡಿಸಲಿದೆ. ಟೀ ಇಂಡಿಯಾದಲ್ಲಿ ಇಂಜುರಿಯಿಂದ ಬಳಲುತ್ತಿರುವ ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ ಜಾಗಕ್ಕೆ ಶಿವಂ ದುಬೆ ಮತ್ತು ರಮಣದೀಪ್ ಸಿಂಗ್ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ಇಬ್ಬರಲ್ಲಿ ಒಬ್ಬರಿಗೆ ಇಂದಿನ ಪಂದ್ಯ ಆಡುವ ಅವಕಾಶ ಸಿಗಬಹುದು.
ಭಾರತ ತಂಡ
ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ/ರಮಣದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ ಹಾಗೂ ಅರ್ಷದೀಪ್ ಸಿಂಗ್

ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್, ರೆಹಾನ್ ಅಹ್ಮದ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಜೋಫ್ರಾ ಆರ್ಚರ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೀಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್,ಫಿಲ್ ಸಾಲ್ಟ್, ಮಾರ್ಕ್ ವುಡ್.